ರಾಯಚೂರು ಜಿಲ್ಲೆಯ ಸಂಕ್ಷಿಪ್ತ ಪರಿಚಯ ಭಾಗ 1

Published on:  2016-10-05
Posted by:  Admin

ರಾಯಚೂರು ಕರ್ನಾಟಕ ರಾಜ್ಯದ ಉತ್ತರ ಭಾಗದಲ್ಲಿರುವ ಪ್ರಮುಖ ಜಿಲ್ಲೆ. ರಾಯಚೂರು ಜಿಲ್ಲೆಯ ಜನಸಂಖ್ಯೆ ೨೦೦೧ ರ ಜನಗಣತಿಯಂತೆ ೧೬,೪೮,೨೧೨. ರಾಯಚೂರು ಜಿಲ್ಲೆಯಲ್ಲಿ ಐದು ತಾಲೂಕುಗಳಿವೆ: ರಾಯಚೂರು, ದೇವದುರ್ಗ, ಸಿಂಧನೂರು, ಮಾನವಿ ಮತ್ತು ಲಿಂಗಸೂಗೂರು. ಈ ಜಿಲ್ಲೆಯ ಜಿಲ್ಲಾಕೇಂದ್ರ ರಾಯಚೂರು ನಗರ. ಇದು ಬೆಂಗಳೂರಿನಿಂದ ೪೦೯ ಕಿಮೀ ದೂರದಲ್ಲಿದೆ.

ಇತಿಹಾಸ:
ಭಾರತದ ಸ್ವಾತಂತ್ರ ಹೋರಾಟ ಮತ್ತು ನಂತರದ ಹೈದ್ರಾಬಾದ್ ಪ್ರಾಂತ್ಯ ವಿಮೋಚನಾ ಹೋರಾಟದಲ್ಲಿ ಈ ಜಿಲ್ಲೆಯ ಜನತೆಯ ಪಾತ್ರ ಪ್ರಮುಖವಾದುದು. ರಾಯಚೂರು ಕೋಟೆ ರಾಯಚೂರು ನಗರದ ಚಾರಿತ್ರಿಕ ಆಕರ್ಷಣೆಗಳಲ್ಲಿ ಒಂದು - ಇದನ್ನು ೧೨೯೪ ರಲ್ಲಿ ಕಟ್ಟಲಾಯಿತು. ರಾಯಚೂರಿನ ಇನ್ನೊಂದು ವಿಶೇಷತೆಯೆಂದರೆ ವಿಜಯನಗರ ಸಾಮ್ರಾಜ್ಯ ಮತ್ತು ಬಹುಮನಿ ಸಾಮ್ರಾಜ್ಯಗಳ ಅರಸರ ಕಾಲದಲ್ಲಿ ಈ ಪ್ರದೇಶ ಹೋರಾಟದ ಅಂಗಳವೂ ಆಗಿತ್ತೆನ್ನಬಹುದು.

ಭೌಗೋಳಿಕ ಲಕ್ಷಣಗಳು:
ಜಿಲ್ಲೆಯ ದಕ್ಷಿಣದಲ್ಲಿ ತುಂಗಭದ್ರಾ ನದಿ ಹಾಗೂ ಉತ್ತರದಲ್ಲಿ ಕೃಷ್ಣಾ ನದಿಯು ಹರಿಯುತ್ತಿದ್ದು, ಬಹುತೇಕ ಬಯಲು ಪ್ರದೇಶವನ್ನು ಹೊಂದಿದೆ. ಲಿಂಗಸೂಗೂರು, ದೇವದುರ್ಗ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಚಿನ್ನದ ಅದಿರಿನ ನಿಕ್ಷೇಪಗಳಿವೆ.

ಹವಾಗುಣ:
ಜಿಲ್ಲೆಯ ಹವಾಗುಣವು ಬಹುತೇಕ ಒಣ ಹವೆ ಇರುತದೆ ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ ೪೫ ಡಿಗ್ರಿವರೆಗೆ ಉಷ್ಣತೆ ಇರುತ್ತದೆ.

ಪ್ರಾಮುಖ್ಯತೆ:
* ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ಇರುವ ಶಾಖೋತ್ಪನ್ನ ವಿದ್ಯುತ್‌ಸ್ಥಾವರ ಕರ್ನಾಟಕದಲ್ಲಿ ಬಳಸಲ್ಪಡುವ ವಿದ್ಯುಚ್ಛಕ್ತಿಯ ಪ್ರಮುಖ ಕೇಂದ್ರಗಳಲ್ಲಿ ಒಂದಾಗಿದೆ.
ಜಿಲ್ಲೆಯ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಪ್ರಮುಖವಾಗಿದೆ.
* ಲಿಂಗಸೂಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿಯು ದೇಶದಲ್ಲಿಯೇ ಅತಿ ಹೆಚ್ಚು ಚಿನ್ನದ ಅದಿರು ಹೊಂದಿರುವ ಗಣಿಯಾಗಿದೆ. ಅಶೋಕನ ಕಾಲದ ಮಸ್ಕಿ ಶಾಸನ ದೊರೆತಿರುವುದು ಇದೇ ತಾಲೂಕಿನ ಮಸ್ಕಿಯಲ್ಲಿದೆ. ಇದೇ ಶಾಸನದಲ್ಲಿ ದೇವನಾಂಪ್ರಿಯಸ ಅಸೋಕಸ ಎನ್ನುವ ಪ್ರಸಿದ್ಡ ಸಾಲಿದೆ.
* ಸಿಂಧನೂರು, ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದಲ್ಲಿ ಭತ್ತ ಬೆಳೆಯುವ ಪ್ರದೇಶವಾಗಿದೆ.
* ಲಿಂಗಸೂಗೂರು ತಾಲ್ಲೂಕಿನ ಮುದುಗಲ್ ನಲ್ಲಿ ಐತಿಹಾಸಿಕ ಕೋಟೆ ಇದ್ದು, ಮೊಹರಂ ಆಚರಣೆ ವಿಜೃಂಭಣೆಯಿಂದ ಜರಗುತ್ತದೆ.
* ಜಲದುರ್ಗದಲ್ಲಿರುವ ಕೋಟೆ, ಅತ್ಯಂತ ವಿಶೇಷವಾಗಿ ನಿರ್ಮಿಸಲಾದ ಕೋಟೆಗಳಲ್ಲಿ ಒಂದಾಗಿದೆ.
* ಮಂತ್ರಾಲಯವು ರಾಯಚೂರಿನಿಂದ ಹತ್ತಿರದಲ್ಲಿದೆ.
* ಮಾನವಿ ಕೊನೆಯ ತಾಲೂಕು.ಈ ಮಾನವಿಯಲ್ಲಿ ದಾಸ ಸಾಹಿತ್ಯ ಉಗಮವಾಗಿದ್ದು. * ವಿಜಯ ದಾಸರು ಮಾನವಿ ತಾಲೂಕಿನವರು.

loading...